ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯ ಮಾಹಿತಿ ನೀಡುವ ಉದ್ದೇಶದಿಂದ ಮತ್ತು ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂಬ ಸದುದ್ದೇಶದಿಂದ ಈ ದಿನವನ್ನು ವಿಶ್ವ ಆರೋಗ್ಯ ದಿನವನ್ನಾಗಿ 1948ರಿಂದ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಹೇಳಿದರು.
ಏಪ್ರಿಲ್ 07ರ ಮಂಗಳವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಲಯದ ಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮನುಷ್ಯನ ಜೀವನ ಶೈಲಿಯಲ್ಲಿ ಬದಲಾವಣೆ ಕಂಡುಬಂದಿದ್ದು, ತಿನ್ನುವ ಆಹಾರ, ತೊಡುವ ಬಟ್ಟೆ ಎಲ್ಲವು ಬದಲಾವಣೆಯಾಗಿದೆ. ಈ ವರ್ಷದ ಘೋಷವಾಕ್ಯ ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲು ಎಂಬ ಸಂದೇಶದೊಂದಿಗೆ ಗ್ರಾಮೀಣ ಭಾಗದಲ್ಲಿ ಜೀವನ ಶೈಲಿಯಲ್ಲಿ ಬದಲಾವಣೆ ತರಲು, ಸಮುದಾಯದಲ್ಲಿ ಜಾಗೃತಿಗೊಳಿಸಲು ಆರೋಗ್ಯ ಇಲಾಖೆ ಸದಾ ಕಾರ್ಯಾನ್ಮುಖವಾಗಬೇಕು ಎಂದರು.
ವೈಜ್ಞಾನಿಕ ತಳಹದಿಯ ಮೇಲೆ ಇಂದಿನ ದಿನಮಾನಗಳಲ್ಲಿ ಕಂಡು ಬರುತ್ತಿರುವ ರೋಗರುಜಿನಗಳ ಕುರಿತು ನಿಖರವಾದ ಮಾಹಿತಿಯನ್ನು ಜನತೆಗೆ ತಲುಪಿಸುವ ಮೂಲಕ ರೋಗ ಹರಡುವಿಕೆಯ ಮಾರ್ಗಗಳನ್ನು ತಡೆಗಟ್ಟಲು ಎಲ್ಲರೂ ಶ್ರಮಿಸೋಣವೆಂದರು.
ಸAಶೋಧನೆ-ಚಾಲಿತ ನೀತಿಗಳು ಮತ್ತು ಅಂತರಾಷ್ಟ್ರೀಯ ತಂಡದ ಕೆಲಸದ ಮೇಲೆ ಕೇಂದ್ರೀಕರಿಸುವ ಮೂಲಕ, ಗುಣಮಟ್ಟದ ಆರೋಗ್ಯ ರಕ್ಷಣೆಯನ್ನು ಎಲ್ಲೆಡೆ ಎಲ್ಲರಿಗೂ ಪ್ರವೇಶಿಸುವಂತೆ ಮಾಡುವ ಗುರಿಯನ್ನು ಹೊಂದಿದೆ. ಈ ಅಭಿಯಾನವು ವಿಜ್ಞಾನ ಮತ್ತು ಸಾರ್ವಜನಿಕ ಆರೋಗ್ಯದಲ್ಲಿ ವಿಶ್ವಾಸವನ್ನು ಪುನರ್‌ನಿರ್ಮಿಸಲು ಒಗ್ಗಟ್ಟನ್ನು ಒತ್ತಾಯಿಸುತ್ತದೆ ಎಂದರು.
ಪ್ರತಿಯೊಬ್ಬರೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ, ಜಾಗೃತಿ ಮೂಡಿಸುವ ಮೂಲಕ, ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಮತ್ತು ನ್ಯಾಯಯುತ, ಆಧಾರಿತ ನೀತಿಗಳನ್ನು ರಚಿಸಲು ಸಹಾಯ ಮಾಡುವ ಮೂಲಕ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತದೆ. ಹವಮಾನಕ್ಕನುಗುಣವಾಗಿ ಬೇಸಿಗೆಯ ಪ್ರಕರತೆ ನವಜಾತ ಶಿಶು, ಗರ್ಭಿಣಿ, ಬಾಣಂತಿ, ಸೇರಿದಂತೆ ವಯೋವೃದ್ಧರ ಸುರಕ್ಷತೆ ಕಾಳಜಿ ಆದ್ಯತೆ ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾದಿಕಾರಿ ಡಾ.ಗಣೇಶ ಕೆ., ಜಿಲ್ಲಾ ಎನ್ಫೋರ್ಸಮೆಂಟ್ ಅಧಿಕಾರಿ ಡಾ.ಶಿವಕುಮಾರ್ ನಾರಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಅಮೃತ್ ಹುಕ್ಕೇರಿ, ಸಹಾಯಕ ಆಡಳಿತ ಅಧಿಕಾರಿ ಶಹಜಾನ್, ಕಚೇರಿ ಅಧಿಕ್ಷಕ ಶ್ರೀಧರ್ ಕುಲಕರ್ಣಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಆಪ್ತ ಸಹಾಯಕ ಲೇಪಾಕ್ಷಯ್ಯ, ಬಿಹೆಚ್‌ಇಓ ನಾಗರಾಜ್ ಸರೋಜಾ ಕೆ., ಹಿರಿಯ ಹೆಚ್‌ಐಓ ಸುರೇಶ, ತಾಯಪ್ಪ, ಅಡಿವೆಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಕಚೇರಿ ಅಧಿಕಾರಿ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದರು.

