ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದಾಗಿ ತಿಳಿಸಿದೆ.ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ಹಾಗೂ KarnatakaOne Mobile App ಮೂಲಕ ಪರಿಶೀಲಿಸಬಹುದಾಗಿದೆ. ಇದಲ್ಲದೆ, ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕವೂ ಫಲಿತಾಂಶದ ಮಾಹಿತಿ ಲಭ್ಯವಾಗಲಿದೆ.
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು DigiLocker (https://www.digilocker.gov.in) ಮೂಲಕ ಡಿಜಿಟಲ್ ರೂಪದಲ್ಲಿ ಪಡೆಯಬಹುದಾಗಿದೆ. DigiLocker ನಲ್ಲಿ ಅಂಕಪಟ್ಟಿ ಪಡೆಯುವ ವಿಧಾನ ಕುರಿತು ಮಾರ್ಗದರ್ಶನಕ್ಕಾಗಿ ನೀಡಿರುವ ವಿಡಿಯೋ ಲಿಂಕ್‌ನ್ನು ಬಳಸಿಕೊಳ್ಳಬಹುದು ಎಂದು ಮಂಡಳಿ ತಿಳಿಸಿದೆ.ಈ ಮಾಹಿತಿಯನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಗಮನಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

