ಮಾನ್ವಿ : 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನಡೆಯುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 12, 2026ರಂದು ನಿಗದಿಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಭಾಗಯ್ಯ ನಾಯಕ ತಿಳಿಸಿದ್ದಾರೆ.
ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ (ಹಾಲ್ ಟಿಕೆಟ್) ಅನ್ನು ಡೌನ್‌ಲೋಡ್ ಮಾಡಿಕೊಂಡು, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಇನ್ನಷ್ಟು ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://dom.karnataka.gov.in ಅಥವಾ ತಾಲೂಕು ಅಲ್ಪಸಂಖ್ಯಾತರ ಅರಿವು ಮೂಡಿಸುವ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *