ಮಸ್ಕಿ: ಸ್ಥಳೀಯ ಪುರಸಭೆಯ ವಿರೋಧ ಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಹಿರಿಯ ಸದಸ್ಯರಾದ ದೊಡ್ಡಕರಿಯಪ್ಪ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು..
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ದೊಡ್ಡಕರಿಯಪ್ಪ ಅವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ವಿವಿಧ ವಾರ್ಡ್‌ಗಳ ಸದಸ್ಯರು ಹಾಗೂ ಬೆಂಬಲಿಗರು ಅವರಿಗೆ ಹೂಗುಚ್ಛ ನೀಡಿ, ಸಿಹಿ ಹಂಚುವ ಮೂಲಕ ಅಭಿನಂದನೆ ಸಲ್ಲಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ದೊಡ್ಡಕರಿಯಪ್ಪ ಅವರು, “ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ ಪಕ್ಷದ ವರಿಷ್ಠರಿಗೆ ಹಾಗೂ ಸಹೋದ್ಯೋಗಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪುರಸಭೆಯಲ್ಲಿ ಆಡಳಿತ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸುವ ಜೊತೆಗೆ, ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇನೆ,” ಎಂದು ತಿಳಿಸಿದರು.

Leave a Reply

Your email address will not be published. Required fields are marked *