ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ವಿವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಎಸ್ ಕೆ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಕಿಶೋರಕುಮಾರ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗುರುವಾರ ಎನ್ಎಸ್ಎಸ್ ವಿಭಾಗದಿಂದ ಆಶ್ರಯ ಕಾಲೋನಿಯಲ್ಲಿ ಹಮ್ಮಿಕೊಂಡ ವಿಶೇಷ ತರಬೇತಿ ಶಿಬಿರದಲ್ಲಿ ಅವರಿಗೆ ಈ ಸನ್ಮಾನ ನೀಡಲಾಯಿತು.ವಿ.ವಿ.ಸಂಘದ ಅಧ್ಯಕ್ಷ ವಿ.ಸಿ.ಹಿರೇಮಠ, ಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಕಾಶಿನಾಥ ಮುರಾಳ, ಸಂಘದ ಕಾರ್ಯದರ್ಶಿ ಎಂ ಎಸ್ ಸರಶಟ್ಟಿ, ನಿರ್ದೇಶಕ ಕಾಶಿನಾಥ ಸಜ್ಜನ, ಪ್ರಾಚಾರ್ಯ ಆರ್ ಎಂ ಬಂಟನೂರ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎ.ಎ. ಗಂಗನಗೌಡರ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.

