ಮಾನ್ವಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ದುರ್ಗಾಭವಾನಿ, ರಾಯಚೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅಲ್ಲದೆ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ದ್ವಿತೀಯ ರ್ಯಾಂಕ್ ಮತ್ತು ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿ ಗಮನ ಸೆಳೆದಿದ್ದಾಳೆ.
ಅಮರಾವತಿ ಗ್ರಾಮದ ಬಸವರಾಜ ಅವರ ಪುತ್ರಿಯಾಗಿರುವ ದುರ್ಗಾಭವಾನಿ ಅವರ ಈ ಸಾಧನೆಗೆ ತಾಲೂಕು ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರತಿಭೆಗೆ ತಹಸೀಲ್ದಾರರು ಸನ್ಮಾನಿಸಿ ಅಭಿನಂದಿಸಿದರು. ವಿದ್ಯಾರ್ಥಿನಿಯ ಶ್ರಮ, ಕುಟುಂಬದ ಬೆಂಬಲ ಹಾಗೂ ಶಿಕ್ಷಕರ ಮಾರ್ಗದರ್ಶನವೇ ಈ ಸಾಧನೆಗೆ ಕಾರಣವೆಂದು ತಿಳಿದುಬಂದಿದೆ.
ತಹಸೀಲ್ದಾರರು, ಶಿಕ್ಷಕರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿನಿಗೆ ಶುಭಾಶಯಗಳನ್ನು ತಿಳಿಸಿದರು.

Leave a Reply

Your email address will not be published. Required fields are marked *