ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಏಪ್ರಿಲ್ 14ರಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಆ ದಿನದಂದು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚರಿಕೆ ಕ್ರಮವಾಗಿ ದಿನಾಂಕ:13-04-2026 ರಾತ್ರಿ 11 ಗಂಟೆಯಿಂದ ದಿನಾಂಕ:15-04-2026ರ ಬೆಳಿಗ್ಗೆ 06ಗಂಟೆಯವರೆಗೆ ರಾಯಚೂರು ಜಿಲ್ಲೆಯಾದ್ಯಂತ ಮದ್ಯ ಮಾರಾಟ ಅಥವಾ ಸಾಗಾಣಿಕೆಯನ್ನು ನಿಷೇಧಿಸಿ ಪ್ರಭಾರಿ ಜಿಲ್ಲಾಧಿಕಾರಿಗಳಾದ ಈಶ್ವರ ಕುಮಾರ ಕಾಂದೂ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮಧ್ಯ ತಯಾರಿಕಾ ಘಟಕಗಳು, ಸಾಗಾಣಿಕೆ, ಸಂಗ್ರಹಣೆಯನ್ನು ಮತ್ತು ಮಾರಾಟ ಮಳಿಗೆಗಳನ್ನು ಬಂದ್ ಮಾಡುವ ಅವಶ್ಯಕತೆ ಇರುವುದರಿಂದ ಈ ದಿನಗಳಂದು ಶುಷ್ಕ ದಿನಗಳನ್ನಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *