ಸಿಂಧನೂರು ಎಪ್ರಿಲ್ 11 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸುರಕ್ಷತಾ ಮಾತೃತ್ವ ದಿನಾಚರಣೆ ಕಾರ್ಯಕ್ರಮ ಪುನರ್ವವಸತಿ ಕೇಂದ್ರ ಬಸನಗೌಡ ಬಾದರ್ಲಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು

ಕಾರ್ಯಕ್ರಮದ ಕುರಿತು ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಪ್ರತಿ ವರ್ಷದಂತೆ ಏಪ್ರಿಲ್ 11ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ ಗರ್ಭಿಣಿಯರ ಮತ್ತು ನವಜಾತ ಶಿಶುಗಳ ಆರೋಗ್ಯದ ಸುರಕ್ಷಿತ ಹೆರಿಗೆ ಪ್ರಸವೋತ್ತರ ಆರೈಕೆ ಬಗ್ಗೆ ಜಾಗೃತಿ ಮೂಡಿಸುವುದು. ಇದರ ಉದ್ದೇಶವಾಗಿದೆ. ಕಸ್ತೂರ ಬಾ ಗಾಂಧಿಯವರ ಜನ್ಮದಿನದಂದು ಆಚರಿಸಲಾಗುವ ಈ ದಿನದಂದು ತಾಯಂದಿರ ಮರಣದ ಪ್ರಮಾಣವನ್ನು ಕಡಿಮೆ ಮಾಡಲು ತಾಯಂದಿರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತದೆ. ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರದ ಆರೈಕೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಪ್ರಸವಪೂರ್ವ ಮತ್ತು ಪ್ರಸವ ನಂತರದ ಆರೈಕೆ ಬಗ್ಗೆ ಜನ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

ನಂತರ ಮಾತನಾಡಿದ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ಅವರು ಹೆರಿಗೆಯ ಸಮಯದಲ್ಲಿ ತಾಯಂದಿರ ಆರೋಗ್ಯದ ಸುರಕ್ಷತೆ ಬಗ್ಗೆ ಖಚಿತಪಡಿಸಿಕೊಳ್ಳುವುದು. ತಾಯಂದಿರ ಆರೈಕೆಗಾಗಿ ಇಲಾಖೆಯಲ್ಲಿ ಸಿಗುವ ಸೇವಾ ಸೌಲಭ್ಯಗಳ ಬಗ್ಗೆ ಸಮಾಜದಲ್ಲಿ ಜನ ಜಾಗೃತಿ ಮೂಡಿಸುವುದು. ಗರ್ಭಧಾರಣೆ ಮತ್ತು ಹೆರಿಗೆಯ ನಂತರದಲ್ಲಿ ತಾಯಂದಿರಲ್ಲಿ ಕಂಡುಬರುವ ಅನಾರೋಗ್ಯದ ಲಕ್ಷಣಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಲಕ್ಷ್ಮಿ ಹಾಗೂ ಪುನರ್ವಸತಿ ಕೇಂದ್ರ ಬಸನಗೌಡ ಬಾದರ್ಲಿ ಬಡಾವಣೆ ಗರ್ಭಿಣಿ ತಾಯಂದಿರು ಹಾಗೂ ಬಾಣಂತಿಯರು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *