ಮಸ್ಕಿ, ಏಪ್ರಿಲ್ 11: ಬೇಸಿಗೆ ಆರಂಭವಾಗಿರುವ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉದ್ಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಮಸ್ಕಿ ತಾಲೂಕು ಪಂಚಾಯತಿಯಲ್ಲಿ ವಿಶೇಷ ಸಹಾಯವಾಣಿ ಆರಂಭಿಸಲಾಗಿದೆ.ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಕುಡಿಯುವ ನೀರಿನ ಸಂಬಂಧಿತ ಸಮಸ್ಯೆಗಳು ಮತ್ತು ದೂರುಗಳನ್ನು ಸ್ವೀಕರಿಸಿ, ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಸಹಾಯವಾಣಿ ವ್ಯವಸ್ಥೆ ಜಾರಿಗೆ ತರಲಾಗಿದೆ.ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ದಾಖಲಿಸಲು 08537-270122 ಸಂಖ್ಯೆಗೆ ಕರೆ ಮಾಡಬಹುದು. ಸಹಾಯವಾಣಿ ಸೇವೆ ಪ್ರತಿದಿನ ಬೆಳಗ್ಗೆ 8.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಲಭ್ಯವಿರುತ್ತದೆ.
ಬೇಸಿಗೆ ಕಾಲ ಮುಗಿಯುವವರೆಗೆ ಈ ಸೇವೆ ನಿರಂತರವಾಗಿ ಕಾರ್ಯನಿರ್ವಹಿಸಲಿದೆ ಎಂದು ಮಸ್ಕಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಅಮರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ವರದಿ,ಸುರೇಶ ಬಳಗಾನೂರು

