ಚೆನ್ನೈ: ತಮಿಳುನಾಡು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಇಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏರ್ಪಡಿಸಿದ್ದ ಮಹತ್ವದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ ಕುಮಾರ ನಾಯಕ ರವರು ಸಭೆಯಲ್ಲಿ ಭಾಗವಹಿಸಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸೋಣ ಚುನಾವಣೆಯ ಪ್ರಣಾಳಿಕೆಯ ಅಂಶಗಳನ್ನು ಮತದಾರರ ಮನೆ ಮನೆಗೆ ಭೇಟಿ ನೀಡಿ ಮನವರಿಕೆ ಮಾಡಿ ಪಕ್ಷದ ಅಭ್ಯರ್ಥಿಗಳನ್ನು ಜಯಗಳಿಸೋಣ ಎಂದು ಮಾತನಾಡಿದರು

ಈ ಸಭೆಯಲ್ಲಿ ಡಿಎಂಕೆ–ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವಿಗಾಗಿ ಸಮಗ್ರ ರಣತಂತ್ರ ರೂಪಿಸುವ ಕುರಿತು ಸುದೀರ್ಘ ಚರ್ಚಿಸಿದರು,ಸಭೆಯಲ್ಲಿ ತಮಿಳುನಾಡು ಕಾಂಗ್ರೆಸ್ ಕಮಿಟಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ಕೆ. ಸೆಲ್ವಪೆರುಂಥಗೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮೈತ್ರಿ ಪಕ್ಷಗಳ ನಡುವಿನ ಸಂಘಟನಾ ಬಲವನ್ನು ಮತ್ತಷ್ಟು ಗಟ್ಟಿಗೊಳಿಸಿ, ತಳಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಮೂಲಕ ಜನರ ವಿಶ್ವಾಸ ಗಳಿಸುವುದು ಅತ್ಯಗತ್ಯ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮುಕುಲ್ ವಾಸ್ನಿಕ್ ಅವರು, ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬಲವನ್ನು ಮತ್ತಷ್ಟು ವೃದ್ಧಿಸಲು, ಯುವಜನತೆ ಹಾಗೂ ಮಹಿಳಾ ಮತದಾರರನ್ನು ಸೆಳೆಯುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸೂಚಿಸಿದರು.

ಎಐಸಿಸಿ ಚುನಾವಣಾ ಉಸ್ತುವಾರಿಗಳಾದ ಶ್ರೀ ಗಿರೀಶ್ ಚಂದ್ವಾಕರ್ ಹಾಗೂ ಕಾರ್ಯದರ್ಶಿಗಳಾದ ಶ್ರೀ ಸೂರಜ್ ಹೆಗಡೆ ಅವರು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಸಂಘಟನೆಯನ್ನು ಬಲಪಡಿಸುವುದು, ಡಿಜಿಟಲ್ ಪ್ರಚಾರವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರೊಂದಿಗೆ ಸಂಪರ್ಕ ಹೆಚ್ಚಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಭಾಗವಹಿಸಿದ ಕರ್ನಾಟಕದ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಮತ್ತು ಡಾ. ಸುಧಾಕರ್ ಅವರು, ತಮ್ಮ ರಾಜ್ಯದ ಚುನಾವಣಾ ಅನುಭವಗಳನ್ನು ಹಂಚಿಕೊಂಡು, ಮೈತ್ರಿ ಪಕ್ಷಗಳ ನಡುವೆ ಸಮನ್ವಯತೆ ಹಾಗೂ ಶಿಸ್ತಿನ ಪ್ರಚಾರವೇ ಜಯದ ಕೀಲಿಕೈ ಎಂದು ಹೇಳಿದರು. ಕೆಪಿಸಿಸಿ ಕಾರ್ಯಧ್ಯಕ್ಷರಾದ ಶ್ರೀ ಎ ವಸಂತ್ ಕುಮಾರರವರು ಶಾಸಕರಾದ ಶ್ರೀ ಅಜಯ್ ಸಿಂಗ್, ಶ್ರೀ ಪ್ರಿಯಾ ಕೃಷ್ಣ ಹಾಗೂ ಡಾ. ಮಂತರ್ ಗೌಡ ಅವರು ಸಹ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಲು ಸಮಗ್ರ ಯೋಜನೆಗಳನ್ನು ಅನುಸರಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಪ್ರಮುಖವಾಗಿ ಕೆಳಗಿನ ಅಂಶಗಳ ಕುರಿತು ನಿರ್ಧಾರ ಕೈಗೊಳ್ಳಲಾಯಿತು:
1) ಪ್ರತಿ ಕ್ಷೇತ್ರದಲ್ಲಿ ಬೂತ್ ಮಟ್ಟದ ಸಮಿತಿಗಳನ್ನು ಪುನರ್‌ವ್ಯವಸ್ಥೆಗೊಳಿಸಿ ಕಾರ್ಯಕ್ಷಮಗೊಳಿಸುವುದು.
2) ಮನೆ ಮನೆಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಅಭಿಯಾನ ಆರಂಭಿಸುವುದು.
3)ಯುವಕರು ಮತ್ತು ಮಹಿಳೆಯರನ್ನು ಸೆಳೆಯುವ ವಿಶೇಷ ಪ್ರಚಾರ ಕಾರ್ಯಕ್ರಮಗಳನ್ನು ರೂಪಿಸುವುದು.
4)ಡಿಎಂಕೆ–ಕಾಂಗ್ರೆಸ್ ಮೈತ್ರಿ ಸಂದೇಶವನ್ನು ಸಮನ್ವಯದಿಂದ ಜನರಿಗೆ ತಲುಪಿಸುವುದು
ಸಾಮಾಜಿಕ ಜಾಲತಾಣಗಳಲ್ಲಿ ಸಂಘಟಿತ ಮತ್ತು ಪರಿಣಾಮಕಾರಿ ಪ್ರಚಾರ ನಡೆಸುವುದು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರು, ಶಾಸಕರು, ಹಿರಿಯ ನಾಯಕರು ಹಾಗೂ ಅಭ್ಯರ್ಥಿಗಳು ಉಪಸ್ಥಿತರಿದ್ದು, ಏಕಮತದಿಂದ ಮೈತ್ರಿ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಈ ಸಭೆ ತಮಿಳುನಾಡಿನ ರಾಜಕೀಯದಲ್ಲಿ ಮೈತ್ರಿ ಪಕ್ಷಗಳ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ…

Leave a Reply

Your email address will not be published. Required fields are marked *