ಸಿಂಧನೂರು ತಾಲೂಕಿನ ರಾಮತ್ನಾಳ, ಜವಳಗೇರಾ ಹಾಗೂ ಗೊಬ್ಬರಕಲ್ ಗ್ರಾಮಗಳ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜನಸ್ಪಂದನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಂಡರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೊಸ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ ಪಕ್ಷದ ಹೆಗಲುಪಟ್ಟಿ ಹಾಕುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಸನಗೌಡ ಬಾದರ್ಲಿ ಅವರು, ಜನರ ವಿಶ್ವಾಸವೇ ಪಕ್ಷದ ನಿಜವಾದ ಶಕ್ತಿ ಎಂದು ತಿಳಿಸಿ, ಗ್ರಾಮ ಮಟ್ಟದಲ್ಲಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ನಾಯಕತ್ವ ಬೆಳೆಸುವ ಅಗತ್ಯವಿದೆ ಎಂದರು.
ಗ್ರಾಮೀಣ ಅಭಿವೃದ್ಧಿ, ರೈತರ ಹಿತಾಸಕ್ತಿ, ಯುವಕರಿಗೆ ಉದ್ಯೋಗಾವಕಾಶಗಳು ಹಾಗೂ ಮೂಲಭೂತ ಸೌಲಭ್ಯಗಳ ಕಲ್ಪನೆಗೆ ಪಕ್ಷ ಬದ್ಧವಾಗಿದೆ ಎಂದು ಅವರು ಹೇಳಿದರು. ಹೊಸದಾಗಿ ಸೇರ್ಪಡೆಗೊಂಡ ಕಾರ್ಯಕರ್ತರು ಪಕ್ಷದ ತತ್ವಗಳು ಮತ್ತು ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸೇರ್ಪಡೆಗೊಂಡ ಮುಖಂಡರು ಮಾತನಾಡಿ, ಜನಸೇವೆ ಮಾಡುವ ಉದ್ದೇಶದಿಂದ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಹಾಗೂ ಗ್ರಾಮ ಮಟ್ಟದ ಮುಖಂಡರು, ಯುವ ಕಾರ್ಯಕರ್ತರು, ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *