ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಏಪ್ರಿಲ್ 14ರಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಯನ್ನು ಆಚರಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.
ಅಂದು ಬೆಳಿಗ್ಗೆ 9:30 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜೆ ಹಾಗೂ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ನಂತರ ರಂಗಮಂದಿರದವರೆಗೆ ಮೆರವಣಿಗೆ ಮಾಡಲಾಗುವುದು. ಬೆಳಿಗ್ಗೆ 11ಗಂಟೆಗೆ ಶ್ರೀ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಮತ್ತು ಕುವೆಂಪು ಕನ್ನಡ ಅಧ್ಯಯನದ ನಿರ್ದೇಶಕರಾದ ಡಾ.ಬಿ.ಎಂ.ಪುಟ್ಟಯ್ಯ ಅವರಿಂದ ಉಪನ್ಯಾಸ ಕಾರ್ಯಕ್ರಮವಿದ್ದು, ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ಸಮಾಜದ ಎಲ್ಲಾ ಮುಖಂಡರು, ವಿವಿಧ ಸಂಘ- ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

