ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ಪ್ರಸ್ತುತ ಬೇಸಿಗೆ ಕಾಲ ಇರುವ ಪ್ರಯುಕ್ತ ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ರಾಯಚೂರಿನ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಕೋರಲಾಗಿದೆ.
ತಾಲೂಕು ಪಂಚಾಯತ್ ಕಚೇರಿಯ ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೂಗೂರಪ್ಪ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಬಸಯ್ಯ ದೂರವಾಣಿ ಸಂಖ್ಯೆ: 08532-230023, 9483203052, ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಚಾಂದಪಾಷ್ 8861979448ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
