ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನಡೆಯಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಟ 65 ವರ್ಷ ಹಾಗೂ ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷದ ಅಭ್ಯರ್ಥಿಗಳು ಕನ್ನಡ ವಿಷಯದೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ತಂದೆ / ತಾಯಿ / ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುರಾಜ್ಯವಲಯ, ರಾಯಚೂರುಕಛೇರಿ ಅಥವಾ ಇಲಾಖೆಯ ವೆಬ್‌ಸೈಟ್ ವಿಳಾಸ: https://horticulturedir.karnataka.gov.in ಮೂಲಕ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 20ರ ಸಂಜೆ 05.30ರೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ರಾಜ್ಯ ವಲಯ, ರಾಯಚೂರಿಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *