ಮಾನ್ವಿ : ಆಲ್ ಇಂಡಿಯಾ ಮಜಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ (AIMIM) ಪಕ್ಷದ ಜನ ಸಂಪರ್ಕ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ತಾಲೂಕು ಅಧ್ಯಕ್ಷ ನಾಸಿರ್ ಅಲಿ ಖುರೇಶಿ ಮಾತನಾಡಿ, ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೂಲವಾಗಿದೆ ಎಂದು ತಿಳಿಸಿದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಸಮಾಜದ ಹಿತಕ್ಕಾಗಿ ಅವರ ತತ್ವಗಳು ಸದಾ ಮಾರ್ಗದರ್ಶಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಆಸಿಫ್ ಖಾನ್, ಸೈಯದ್ ಅಸಾದ್ ಖಾದ್ರಿ ಸಾಹೇಬ್, ಸೈಯದ್ ರಾಜಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *