ರಾಯಚೂರು ಏಪ್ರಿಲ್ 14 (ಕರ್ನಾಟಕ ವಾರ್ತೆ): ರಾಯಚೂರಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ವಿವಿಧ ಗಣ್ಯರಿಂದ ಪೂಜೆ ಕಾರ್ಯಕ್ರಮ ನೆರವೇರಿಸಿ, ಮಾಲಾರ್ಪಣೆ ಮಾಡಿ, ಮೆರವಣಿಗೆಗೆ ಚಾಲನೆ ನೀಡಲಾಯಿತು.
ಮೆರವಣಿಗೆಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರಂಗಮಂದಿರದವರೆಗೆ ವಿವಿಧ ಕಲಾ ಕಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬೀದರ್ ಬುದ್ಧ ವಿಹಾರನ ಬಂತೇಜಿ ಯಾಕತ್ನೂರ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರವೀಣ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಮುಖಂಡರಾರ ರವಿ ಭೋಸರಾಜು, ರವೀಂದ್ರ ಜಲ್ದಾರ್, ಕೆ.ಇ.ಕುಮಾರ್, ಮಾರಪ್ಪ, ನರಸಪ್ಪ ದಡೋರ್, ಎಂ.ಈರಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜ ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.

Leave a Reply

Your email address will not be published. Required fields are marked *