ರಾಯಚೂರು ಏಪ್ರಿಲ್ 14 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವ-ಉದ್ಯೋಗವನ್ನು ಸ್ಥಾಪಿಸಲು ಆಸಕ್ತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉಚಿತವಾಗಿ 4 ವಾರಗಳ ಪ್ಯಾಷನ್ ಡಿಸೈನಿಂಗ್ ಟೆಲರಿಂಗ್ ವಲಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಕಾರ್ಯಕ್ರಮವು ರಾಯಚೂರು ಹಾಗೂ ಮಾನವಿಯಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಉದ್ಯಮಶೀಲತೆಯ ಗುಣಲಕ್ಷಣಗಳು, ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಮತ್ತು ಸಾಲ ಸೌಲಭ್ಯಗಳ ಮಾಹಿತಿ ಹಾಗೂ ಸ್ವಯಂ ಉದ್ಯಮಗಳನ್ನು ಸ್ಥಾಪಿಸಲು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ರಾಯಚೂರು ಜಿಲ್ಲೆಯ ಆಸಕ್ತ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳು 18 ವರ್ಷ ದಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕನಿಷ್ಠ ಹತ್ತನೇ ತರಗತಿ ಪಾಸಾಗಿರಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಏಪ್ರಿಲ್ 17ರೊಳಗಾಗಿ ಮೊಬೈಲ್ ಸಂಖ್ಯೆ: 9986600631 ಅಥವಾ 7899881410ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅಥವಾ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನವೀನ ಆಸ್ಪತ್ರೆ ಪಕ್ಕದಲ್ಲಿ, ರಾಯಚೂರು ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
