ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಭಕ್ತಿ ಭಾವದಿಂದ ಹಾಗೂ ಗೌರವಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಕೆ ಅವರು ಡಾ. ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾಜದ ಮೇಲಿನ ಅವರ ಅಪಾರ ಕೊಡುಗೆ ಹಾಗೂ ಸಂವಿಧಾನ ರಚನೆಯಲ್ಲಿ ಅವರ ಮಹತ್ವದ ಪಾತ್ರವನ್ನು ವಿವರವಾಗಿ ಪ್ರಸ್ತಾಪಿಸಿದರು.ಹಾಗೂ ನರ್ಸಿಂಗ್ ಪ್ರಾಚಾರ್ಯ ಲಾಜರ್ ಸಿರಿಲ್ ಮಾತನಾಡಿ, ಡಾ. ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿಯೇ ಅಲ್ಲದೆ, ಸಮಾಜದ ಅಸಮಾನತೆಗಳನ್ನು ನಿವಾರಿಸಲು ಹೋರಾಡಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಹೇಳಿದರು. ಶಿಕ್ಷಣವೇ ಸಮಾನತೆಯ ದಾರಿ ಎಂದು ಸಾರಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯೂ ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಅಂಬೇಡ್ಕರ್ ಅವರ ತತ್ವಗಳನ್ನು ಸ್ಮರಿಸಿದರು. ಕಾರ್ಯಕ್ರಮವು ಶಿಸ್ತಿನೊಂದಿಗೆ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

