ಸಿಂಧನೂರು : ತಾಲೂಕಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಲೋಕೋಪಯೋಗಿ ಇಲಾಖೆಯ ಅನುದಾನದಡಿ ಬಹುಕಾಲದ ರಸ್ತೆ ಸಮಸ್ಯೆಗೆ ಪರಿಹಾರ ಸಿಗುವಂತೆ ಡಾಂಬರೀಕರಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ಅರಗಿನಮರ ಕ್ಯಾಂಪಿನಿಂದ ಆರ್.ಎಚ್. ನಂ–1ರವರೆಗೆ ರೂ.3.80 ಕೋಟಿ ವೆಚ್ಚದಲ್ಲಿ ಹಾಗೂ ಆರ್.ಎಚ್. ನಂ–1ರಿಂದ ಈರಣ್ಣ ಕ್ಯಾಂಪಿನವರೆಗೆ ರೂ.2.40 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಶಾಸಕ ಹಂಪನಗೌಡ ಬಾದರ್ಲಿ ಅವರ ಅನುಪಸ್ಥಿತಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ (SUDA) ಅಧ್ಯಕ್ಷ ಬಾಬುಗೌಡ ಬಾದರ್ಲಿ ಅವರು ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಜನರ ಸಂಚಾರ ಸುಗಮಗೊಳಿಸುವುದು ಹಾಗೂ ರೈತರ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಅನುಕೂಲ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಬಹಳ ಪ್ರಯೋಜನವಾಗಲಿದೆ. ಮಳೆಗಾಲದಲ್ಲಿ ಉಂಟಾಗುತ್ತಿದ್ದ ಸಂಚಾರ ತೊಂದರೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಯಿತು.
ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ತಾಲೂಕಿನಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *