ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದ ಜನವರಿಯಿಂದ ಡಿಸೆಂಬರ್ ವರೆಗೂ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರರಚನೆಯ ಕಲಾವಿದರ ಹೆಸರು / ಚಿತ್ರಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ– ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ.11ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿ ಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ವೆಬ್‌ಸೈಟ್ ವಿಳಾಸ: https://kpp.karnataka.gov.in ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಆಡಳಿತಾಧಿಕಾರಿಗಳಾದ ಕೆ.ಬಿ.ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
