ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ರಾಯಚೂರು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗೆ ಕಲಾ ವಿಭಾಗ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿದಂತೆ ಒಟ್ಟು 614 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಈ ಪೈಕಿ 387 ವಿದ್ಯಾರ್ಥಿಗಳು ಪಾಸ್ ಆಗುವ ಮೂಲಕ ಕಾಲೇಜಿನ ಒಟ್ಟು ಶೇಕಡ 63.03ರಷ್ಟು ಫಲಿತಾಂಶವನ್ನು ಪಡೆಯುವ ಉತ್ತಮ ಸಾಧನೆ ಮಾಡಲಾಗಿದೆ ಎಂದು ಪ್ರಾಂಶುಪಾಲರಾದ ಡಾ.ಕುಂಟೆಪ್ಪ ಗೌರಿಪುರ ಹೆಚ್. ಅವರು ತಿಳಿಸಿದ್ದಾರೆ.

ಕಾಲೇಜಿನಲ್ಲಿ 39 ವಿದ್ಯಾರ್ಥಿಗಳು ಡಿಸ್ಟಿಂಗಿಷನ್, 245 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ 24 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕಳೆದ ವರ್ಷ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಶೇ.42 ಪ್ರತಿಶತ ಬಂದಿತ್ತು. ಈ ಸಲದ ಫಲಿತಾಂಶ ಹೆಚ್ಚಳಕ್ಕೆ ನಮ್ಮ ಇಲಾಖೆಯ ಮೇಲಾಧಿಕಾರಿಗಳ ನಿರ್ದೇಶನದಂತೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಂಡು ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲಾಗಿದೆ. ಇದಕ್ಕೆ ಮಾರ್ಗದರ್ಶನ ನೀಡಿದ ಕಾಲೇಜಿನ ಉಪನ್ಯಾಸಕರು ಅತ್ಯಂತ ಕಾಳಜಿಯಿಂದ ಮಕ್ಕಳಿಗೆ ವಿಶೇಷ ತರಗತಿಗಳನ್ನು ಮಾಡಿ ಈ ಶೈಕ್ಷಣಿಕ ವರ್ಷ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಕಾಲೇಜಿನ ಒಟ್ಟು ಶೇ. 63.03 ರಷ್ಟು ಫಲಿತಾಂಶ ಪಡೆಯಲಾಗಿದೆ.

ಕಳೆದ ವರ್ಷಕ್ಕಿಂತ ಈ ಸಲ ಶೇ. 21 ಪ್ರತಿಶತ ಫಲಿತಾಂಶ ಹೆಚ್ಚಳವಾಗಿದೆ. ಇದಕ್ಕೆ ಕಾರಣಿಭೂತರಾದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ ಎಂದು ರಾಯಚೂರು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಂಟೆಪ್ಪ ಗೌರಿಪುರ ಹೆಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *