ದಾವಣಗೆರೆ: ಸಾಲಿಗ್ರಾಮದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಹಾಗೂ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ 2019ನೇ ಸಾಲಿನ ‘ಸರಸ್ವತಿ ಕನ್ನಡ ರತ್ನ’ ರಾಜ್ಯ ಪ್ರಶಸ್ತಿಯನ್ನು ವಿಜಯನಗರ ಜಿಲ್ಲೆಯ ಶ್ರೀ ದಾದಾಪೀರ್ ಹೆಚ್. ಕೊಟ್ಟೂರು ಅವರಿಗೆ ಪ್ರದಾನ ಮಾಡಲಾಯಿತು.

ಪತ್ರಿಕೋದ್ಯಮ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ದಾದಾಪೀರ್ ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಹಸ್ತಾಂತರಿಸಲಾಯಿತು.

ಸಂದರ್ಭದಲ್ಲಿ ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಅಧ್ಯಕ್ಷರಾದ ಡಾ. ನಾಗೇಶ್ ಸಂಜೀವ ಕಿಣಿ ಬೆಂಗಳೂರು, ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀಪತಿ ರಾಘವೇಂದ್ರ ಶೆಣೈ ಸಾಲಿಗ್ರಾಮ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರಾದ ದಾದಾಪೀರ್ ಅವರು ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಿ, ತಮ್ಮ ಹೆತ್ತವರಿಗೆ ಹಾಗೂ ಹುಟ್ಟೂರಿಗೆ ಕೀರ್ತಿ ತರಲಿ ಎಂದು ಸಂಸ್ಥೆಯು ಶುಭ ಹಾರೈಸಿದೆ.

Leave a Reply

Your email address will not be published. Required fields are marked *