ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಲಿಂಗೈಕ್ಯ ಶತಾಯುಷಿ ಷ.ಬ್ರ.ಪರ್ವತಾ ಶಿವಾಚಾರ್ಯ ಮಹಾಸ್ವಾಮಿಗಳ 26ನೇ ವರ್ಷದ ಪುಣ್ಯಸ್ಮರಣೋತ್ಸವ ನಿಮಿತ್ಯವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದು (ಏ.18) ನಡೆಯಲಿವೆ. ಪುಣ್ಯಸ್ಮರಣೋತ್ಸವ ಅಂಗವಾಗಿ ಮುಂಜಾನೆ 8-00 ಘಂಟೆಗೆ ತುಂಬಗಿ ಸಾಸನೂರು ಹಿರೇಮಠದ ಷ.ಬ್ರ. ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ಹಾಗೂ ಬ್ರಹನ್ಮಠದ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಪರ್ವತಾ ಶಿವಾಚಾರ್ಯರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ನಾವದಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರ ಸಮ್ಮುಖದಲ್ಲಿ ಲಿಂಗೈಕ್ಯ ಷ.ಬ್ರ.ಪರ್ವತಾ ಶಿವಾಚಾರ್ಯರ ಮಹಾಸ್ವಾಮಿಗಳ ಪಲ್ಲಕ್ಕಿಯೊಂದಿಗೆ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಕ್ತಿ ಭಾವದೊಂದಿಗೆ ಜರಗುವುದು. ನಂತರ ನೂತನ ಬ್ರಹನ್ಮಠದಲ್ಲಿ ಮಹಾಪ್ರಸಾದ ಕಾರ್ಯಕ್ರಮ ನಡೆಯುವುದು. ಯಾವತ್ತು ಶ್ರೀಮಠದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಲಿಂಗೈಕ್ಯ ಶ್ರೀ ಪರ್ವತಾ ಶಿವಾಚಾರ್ಯರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *