ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಜಿಲ್ಲೆಯ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದ ಸ್ಥಳಿಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಏಪ್ರಿಲ್ 18ರ ಶನಿವಾರ ಬೆಳಿಗ್ಗೆ 10ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠ ಹಾಗೂ ಕಲಬುರಗಿ ಜಿಲ್ಲಾಡಳಿತ ವತಿಯಿಂದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಗಾರವನ್ನು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ. ವೆಂಕಟಸಿಂಗ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅಧಿಕಾರಿಗಳಾಗಿ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಡಾ. ರಿಚರ್ಡ ವಿನ್ಸೆಂಟ್ ಡಿಸೋಜಾ ಹಾಗೂ ಡಾ. ಮಹೇಶ ವಾಲ್ವೇಕರ ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಫೌಜಿಯಾ ತರುನ್ನಮ್ಮ ಅವರು ಅಧ್ಯಕ್ಷತೆ ವಹಿಸಲಿದ್ದಾರೆ,

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತರಾದ ಅವಿನಾಶ ಶಿಂಧೆ ಹಾಗೂ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಅವರು ಭಾಗವಹಿಸಲಿದ್ದಾರೆ.

ಈ ಕಾರ್ಯಗಾರಕ್ಕೆ ಜಿಲ್ಲಾ, ತಾಲ್ಲೂಕ ಮಟ್ಟದ ಅಧಿಕಾರಿಗಳು ಹಾಗೂ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಪ್ಪದೆ ಭಾಗವಹಿಸುವಂತೆ ಮಾಹಿತಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *