ದೇವದುರ್ಗ ಮೇ 31 : ದೇವದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಲಿಂಗಣ್ಣ ನಾಯಕ ಹವಾಲ್ದಾರ್ ಅವರು, ರಾಜ್ಯ ಸರ್ಕಾರದಲ್ಲಿ ಬಸನಗೌಡ ದದ್ದಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸನಗೌಡ ದದ್ದಲ್ ಅವರು ಪಕ್ಷದ ನಿಷ್ಠಾವಂತ ನಾಯಕರು ಆಗಿದ್ದು, ಜನಪರ ಕೆಲಸಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

 

ಅವರ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅವರು ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.

 

ಬಸನಗೌಡ ದದ್ದಲ್ ಅವರಿಗೆ ಸಚಿವ ಸ್ಥಾನ ನೀಡಿದರೆ ರಾಯಚೂರು ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಲಿಂಗಣ್ಣ ನಾಯಕ ಹವಾಲ್ದಾರ್ ಅಭಿಪ್ರಾಯಪಟ್ಟರು.

 

ಪಕ್ಷದ ಕಾರ್ಯಕರ್ತರ ಆಶಯವೂ ಇದೇ ಆಗಿದ್ದು, ಶೀಘ್ರದಲ್ಲೇ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ

Leave a Reply

Your email address will not be published. Required fields are marked *