ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ ಸೇತುವೆ ಬಳಿಯಲ್ಲಿ ಕಂಪ್ಲಿ ಮಾರ್ಗವಾಗಿ ಗಂಗಾವತಿ ಕಡೆಗೆ ಸಾಗುತ್ತಿದ್ದ ಅಕ್ರಮ ಅಕ್ಕಿ ದಾಸ್ತಾನು ಲಾರಿಯನ್ನು ಖಚಿತ ಮಾಹಿತಿ ಆಧಾರದ ಮೇಲೆ ತಡೆದ ಆಹಾರ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಬಡವರ ಅನ್ನಭಾಗ್ಯ ಅಕ್ಕಿ ವಶಕ್ಕೆ ಪಡೆಯುವ ಜೊತೆಗೆ ವಾಹನ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಂಪ್ಲಿ ಮಾರ್ಗವಾಗಿ ಗಂಗಾವತಿ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸುಮಾರು 3 ಲಕ್ಷ 88 ಸಾವಿರ ಮೌಲ್ಯದ 330 ಚೀಲ ಅಕ್ಕಿ ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಮತ್ತು ಲಾರಿಯನ್ನು ವಶ ಪಡೆದುಕೊಂಡಿದ್ದಾರೆ. ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿರುಪಾಕ್ಷಗೌಡ, ಪೊಲೀಸ್ ಇಲಾಖೆಯ ಎಎಸ್‌ಐ ಮಹಾಂತೇಶ್, ಸಿಬ್ಬಂದಿಗಳಾದ ಮಲ್ಲೇಶ್, ಸುರೇಶ್ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *