ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಬಂಜಾರ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಂಜಾರ ಸಮುದಾಯದ ಜಿಲ್ಲಾ ಸಂಚಾಲಕ ಲಾಲಪ್ಪ ರಾಠೋಡ್‌ ಹೇಳಿದರು .

ಅವರಿಂದು ಪತ್ರಕರ್ತರೊಂದಿಗೆ ಮಾತನಾಡುತ್ತಾ
ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ
ನಂತರ ಕಳೆದ ಮೂರು ವರ್ಷಗಳಿಂದ ಬಂಜಾರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಯಾವುದೇ ಸ್ಥಾನಮಾನ ದೊರೆತಿಲ್ಲ. ಈ ಬಾರಿ ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿದರೆ ಮುಂಬರುವ ಚುನಾವಣೆಗಳಲ್ಲಿ ರಾಜ್ಯಾದ್ಯಂತ ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದರು. ಒಂದು ವೇಳೆ ಸಮುದಾಯವನ್ನು ಕಡೆಗಣಿಸಿ ಸಚಿವ ಸ್ಥಾನ ನೀಡದಿದ್ದರೆ, “ತಾಂಡಗಳ ಬಚಾವೋ ಕಾಂಗ್ರೆಸ್ ಹಠಾವೋ” ಎಂಬ ಘೋಷಣೆಯೊಂದಿಗೆ ಮುಂದಿನ ಚುನಾವಣೆಯಲ್ಲಿ ಹೋರಾಟ ನಡೆಸ ಬೇಕಾದ ಅನಿವಾರ್ಯತೆ ಉಂಟಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು . 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ಮೀಸಲಾತಿ ನೀತಿಯ ವಿರುದ್ಧ “ಬಿಜೆಪಿ ಹಠವೂ ತಾಂಡಗಳ ಬಚಾವೋ ಎಂಬ ಘೋಷಣೆಯೊಂದಿಗೆ ಬಂಜಾರ ಸಮುದಾಯ ಹೋರಾಟ ನಡೆಸಿ ಬಿಜೆಪಿಗೆ ತಕ್ಕ ಉತ್ತರ ನೀಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರವೂ ಸಮುದಾಯದ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ, 2028ರ ವಿಧಾನಸಭೆ ಚುನಾವಣೆಯಲ್ಲಿ ಸೂಕ್ತ ರಾಜಕೀಯ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಬಂಜಾರ ಸಮುದಾಯದ ಜಂಟಿ ಕಾರ್ಯದರ್ಶಿ ದೇವಪ್ಪ ರಾಠೋಡ್, ತಾಲೂಕು ಉಪಾಧ್ಯಕ್ಷ ಚಂದ್ರು, ಜಿಲ್ಲಾ ಜಂಟಿ ಕಾರ್ಯದರ್ಶಿ ಶಂಕರ್ ಪವಾರ್ ನಿಲೇಶ್ ಪವಾ‌ರ್ ಚಲುವಪ್ಪ ಚೌಹಾಣ್, ಗುಂಡಪ್ಪ ಜಾದವ್‌ ಸೇರಿದಂತೆ ಹಲವರು ಇದ್ದರು

Leave a Reply

Your email address will not be published. Required fields are marked *