ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಜಿಲ್ಲಾಘಟಕದ ಅಧ್ಯಕ್ಷರಾದ ಹನುಮೇಶ ನಾಯಕ ಸಾದಾಪುರ ಮಾತನಾಡಿ ತಾಲೂಕಿನಲ್ಲಿ ವಾಲ್ಮೀಕಿ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು ಗ್ರಾಮೀಣ ಭಾಗದ ಪ.ಪಂಗಡ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲ್ಲಿ ಎನ್ನುವ ಉದ್ದೇಶದಿಂದ ಸರಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣಾ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ಪಟ್ಟಣದಲ್ಲಿ ಹಲವು ವಸತಿ ನಿಲಯಗಳ ಮೂಲಕ ವಸತಿ ವ್ಯವಸ್ಥೆ ಕಲ್ಪಸಿ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯಕ್ಕಾಗಿ ಲಕ್ಷಾಂತರ ಅನುದಾನವನ್ನು ನೀಡುತ್ತಿದ್ದಾರು ಕೂಡ ಪರಿಶಿಷ್ಟ ವರ್ಗಗಳ ಕಲ್ಯಾಣಾ ಇಲಾಖೆಯ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯಗಳು ಕೂಡ ದೊರೆಯುತ್ತಿಲ್ಲ. ಉತ್ತಮ ಗುಣಮಟ್ಟದ ಆಹಾರ ,ಶುದ್ದಕುಡಿಯುವ ನೀರು ಕೂಡ ನೀಡುತ್ತಿಲ್ಲ. ಸರಕಾರದ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಅದ್ದರಿಂದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹಾಲಿಂಗಪ್ಪ ಇಂಗಳದಾಳ ಅವರನ್ನು ತಾಲೂಕಿನಿಂದ ವರ್ಗವಣೆ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಹೆಸರಿನಲ್ಲಿ ಬಿಡುಗಡೆಯಾದ ಎಲ್ಲಾ ಅನುದಾನಗಳ ಬಳಕೆಯ ಕುರಿತು ತನಿಖೆ ನಡೆಸಬೇಕು. ಹಾಗೂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ವಸತಿ ಶಾಲೆಯಲ್ಲಿ ಕನಿಷ್ಟ ಮೂಲಸೌಲಭ್ಯಕಲ್ಪಿಸಬೇಕು, ಮತ್ತು ಗುಣಮಟ್ಟದ ಆಹಾರ ವಿತರಿಸಬೇಕು ಎಂದು ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆ ವತಿಯಿಂದ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
.ಬುಡ್ಡಪ್ಪ ನಾಯಕ ಮಲ್ಲಿನಮಡಗು.ಹನುಮಂತ ಸೀಕಲ್, ರಮೇಶ ನಾಯಕ ಕಪಗಲ್.ಅಯ್ಯಪ್ಪ ನಾಯಕ ಮ್ಯಾಕಲ್ ಸೇರಿ ಇನ್ನಿತರರು ಇದ್ದರು.
ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಜಿಲ್ಲಾಘಟಕದ ಅಧ್ಯಕ್ಷರಾದ ಹನುಮೇಶ ನಾಯಕ ಸಾದಾಪುರ ಮಾತನಾಡಿದರು.

