ಬಳ್ಳಾರಿ / ಕಂಪ್ಲಿ : ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವ ಸವಾರರ ವಿರುದ್ಧ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ವಿಧಿಸುತ್ತಿದೆ.

ಬಳ್ಳಾರಿ ಜಿಲ್ಲೆಯಾದ್ಯಂತ ಜೂನ್ 1ರಿಂದ ಹೆಲ್ಮೆಟ್ ಧಾರಣೆ ಕಡ್ಡಾಯ ನಿಯಮ ಜಾರಿಯಾಗಿದ್ದರೂ, ಹೆಲ್ಮೆಟ್‌ ಧರಿಸದ ಬೈಕ್ ಸವಾರರಿಗೆ ಪೊಲೀಸರು ಸೋಮವಾರ ದಂಡ ವಿಧಿಸಿದರು.

ಪಿಐ ಕೆ.ಬಿ.ವಾಸುಕುಮಾರ್ ಮಾತನಾಡಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಆದೇಶದಂತೆ ಠಾಣೆ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧಾರಣೆ ಕುರಿತು ಈಗಾಗಲೇ ಸಾಕಷ್ಟು ಜಾಗೃತಿ ಜಾಥಾ, ಅಭಿಯಾನ, ಬ್ಯಾನರ್ ಅಳವಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ. ಆದರೂ ಹೆಲ್ಮೆಟ್‌ ಧರಿಸದ ಸವಾರರಿಗೆ ದಂಡ ವಿಧಿಸುತ್ತಿರುವುದಾಗಿ ತಿಳಿಸಿದರು.

ಈ ವೇಳೆ ಪಿಎಸ್‍ಐ ಟಿ.ಮಹಾಂತೇಶ್, ಸಿಬ್ಬಂದಿ ಮಹೇಶ್ ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *