ಅರಕೇರಾ: ತಾಲ್ಲೂಕಿನ ಬಿ.ಗಣೇಕಲ್ ಗ್ರಾಮದ ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್ (ರಿ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉತ್ತರ ಕರ್ನಾಟಕದ ಸ್ನೇಹ ಲೋಕ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ 16 ಡೆಸ್ಕ್‌ಗಳನ್ನು ದೇಣಿಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್ (ರಿ) ಅಧ್ಯಕ್ಷರಾದ ಹಂಪಣ್ಣ ಪಲ್ಲೇದ್ ಅವರು ಮಾತನಾಡಿ ಉತ್ತರ ಕರ್ನಾಟಕ ಸ್ನೇಹ ಲೋಕ ಟ್ರಸ್ಟ್‌ನ ಪದಾಧಿಕಾರಿಗಳು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ದೇಣಿಗೆ ನೀಡಲಾಗಿದೆ ಎಂದು ತಿಳಿಸಿದರು. ದೇಣಿಗೆಯಾಗಿ ನೀಡಲಾದ ಡೆಸ್ಕ್‌ಗಳು ವಿದ್ಯಾರ್ಥಿಗಳಿಗೆ ಸುಗಮವಾದ ಕಲಿಕಾ ವಾತಾವರಣವನ್ನು ಕಲ್ಪಿಸಲಿದ್ದು, ಶಾಲೆಯ 50 ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.
ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಸದಸ್ಯರು ಉತ್ತರ ಕರ್ನಾಟಕದ ಸ್ನೇಹ ಲೋಕ ಟ್ರಸ್ಟ್ (ರಿ), ಬೆಂಗಳೂರು ಅವರ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿ, ವಿದ್ಯಾರ್ಥಿಗಳ ಶಿಕ್ಷಣದ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಿದರು.

