ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಲಯದಿಂದ ಇಲಾಖೆಯಿಂದ ನಡೆದ ಎನ್.ಐ.ಡಿ. ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಮಾತನಾಡಿ ಆರೋಗ್ಯ ಇಲಾಖೆಯಿಂದ ಪೊಲಿಯೋ ನಿರ್ಮೂಲನೆಗಾಗಿ ಪೋಲಿಯೋ ಮುಕ್ತ ದೇಶ ನಿರ್ಮಾಣಕ್ಕಾಗಿ ಜೂ.28 ರಂದು ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತದೆ ಅಂದು ಆರೋಗ್ಯ ಇಲಾಖೆ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದಲ್ಲಿ 0ಯಿಂದ 5 ವರ್ಷದ ಎಲ್ಲಾಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ನೀಡುವ ಮೂಲಕ ಅವರನ್ನು ಶಾಶ್ವತ ಅಂಗವಿಕರಾಗುವುದನ್ನು ತಡೆಯುವುದಕ್ಕೆ ಸಾಧ್ಯವಿದೆ ಜೂ.28 ರಂದು ಪೋಲಿಯೋ ದಿನ ಅಂಗವಾಗಿ ತಾಲೂಕಿನಲ್ಲಿ 47,877 ಮಕ್ಕಳಿಗೆ ಪೋಲಿಯೋ ಹನಿಗಳನ್ನು ನೀಡುವ ಗುರಿಯನ್ನು ಹೊಂದಿದು ಆರೋಗ್ಯ ಇಲಾಖೆಯಿಂದ 222 ತಂಡಗಳನ್ನು ರಚಿಸಿ ಮನೆ ಮನೆ ಭೇಟಿ ನೀಡಿ 0ಯಿಂದ 5 ವರ್ಷದ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ನೀಡಲಾಗುವುದು. ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದರು.
ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮಾತನಾಡಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ತಾಲೂಕಿನ ಎಲ್ಲಾ ಇಲಾಖೆಗಳ ಆದಿಕಾರಿಗಳು ಅಗತ್ಯ ಸಹಕಾರ ನೀಡಬೇಕು. ಗ್ರಾಮೀಣ ಭಾಗದಲ್ಲಿನ ಸಾರ್ವಜನಿಕರಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸುವುದಕ್ಕೆ ಶಿಕ್ಷಣ ಇಲಾಖೆ ಯಿಂದ ಶಾಲಾ ವಿದ್ಯಾರ್ಥಿಗಳ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥ ನಡೆಸಬೇಕು ಎಂದು ತಿಳಿಸಿದರು.
ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕರಾದ ನಾಗರಾಜ, ಪುರಸಭೆ ಆರೋಗ್ಯ ನಿರೀಕ್ಷಕರಾದ ಮಹೇಶ್ ಕುಮಾರ, ಡಾ.ಅಂಬಿಕಾ ಮಧುಸೂಧನ್, ಆರೋಗ್ಯಧಿಕಾರಿ ಚಂದ್ರಶೇಖರ್, ಆಶಾಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದರು.

