ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ರಾಯಚೂರಿನ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದವರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿವೇಶನ ಹೊಂದಿರುವ ಬಗ್ಗೆ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಅರ್ಜಿಯನ್ನು ಜೂನ್ 08ರೊಳಗಾಗಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಅಥವಾ ಕುಟುಂಬದವರು ಈ ಹಿಂದೆ ಯಾವುದೇ ಯೋಜನೆಯಡಿ ವಸತಿ ಸೌಲಭ್ಯವನ್ನು ಪಡೆದಿಲ್ಲವೆಂದು ಗ್ರಾಮೀಣ ಭಾಗದವರು ಗ್ರಾಮ ಪಂಚಾಯಿತಿಯಿಂದ ಹಾಗೂ ನಗರ ಪ್ರದೇಶದವರು ಪಟ್ಟಣ ಪಂಚಾಯತ್, ನಗರಸಭೆ, ಪುರಸಭೆಯಿಂದ ದೃಢೀಕರಣ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *