ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಆಯ್ಕೆ ಮಾಡುಲು ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಷರತ್ತುಗಳು ಮತ್ತು ನಿಬಂಧನೆಗಳು: ರಾಯಚೂರು ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ತರಬೇತಿಯ ಅವಧಿಯಲ್ಲಿ ಮಾಹೆಯಾನ 4,000 ರೂ.ಗಳ ತರಬೇತಿ ಭತ್ಯೆಯನ್ನು ನೀಡಲಾಗುವುದು. ಅಭ್ಯರ್ಥಿಗಳ ವಾರ್ಷಿಕ ಕುಟುಂಬದ ಆದಾಯ ಪ್ರವರ್ಗ-1ಕ್ಕೆ 3.50 ಲಕ್ಷ ರೂ. ಹಾಗೂ ಪ್ರವರ್ಗ 2ಎ,3ಎ,3ಬಿ ವರ್ಗಕ್ಕೆ 2.50 ಲಕ್ಷ ರೂ.ಗಳಿಗೆ ಮೀರಬಾರದು.
ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷದೊಳಗಾಗಿ ಕಾನೂನು ಪದವೀ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೊಂದಾಯಿಸಿರಬೇಕು. ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ 38 ವರ್ಷ ವಯೋಮಿತಿಯಲ್ಲಿರಬೇಕು.
ನಿಗದಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲೆಗಳು ಹಾಗೂ 2 ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಜುಲೈ 10ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-295996ಗೆ ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ ಮೋದಲನೇ ಮಹಡಿ ಬಿ-2 ಕೊಠಡಿ ಯಕ್ಲಾಸಪೂರ ರಸ್ತೆ ರಾಯಚೂರು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

