ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ರಾಯಚೂರಿನ ಮಾಣಿಕ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಟೋಯೋಟಾ ಇಂಡಸ್ಟ್ರಿಯಲ್ ಇಂಜಿನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರ ವತಿಯಿಂದ ಕ್ಯಾಂಪಸ್ ಸೆಲೆಕ್ಷನ್ ಕಾರ್ಯಕ್ರಮವನ್ನು ಜೂನ್ 11 ಹಾಗೂ 12ರ ಬೆಳಿಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಐಟಿಐ ಯಾವುದೇ ವೃತ್ತಿಯ ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಹಾಗೂ ಈಗಾಗಲೇ ಐಟಿಐ ಉತ್ತೀರ್ಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9035198134, 9538003397 ಅಥವಾ 8904784507 ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ದರ್ಜೆ -01ರ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

