ಮಾನ್ವಿ, ಜೂನ್ 10: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಸಿಂಧನೂರು ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ವಾಲ್ಮೀಕಿ ಭವನದ ಸ್ಥಳವನ್ನು ಮಾಜಿ ಸಚಿವರು, ವಿಧಾನ ಪರಿಷತ್ತಿನ ಮಾಜಿ ಸಭಾ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಹಂಪಯ್ಯ ನಾಯಕ್ ಪರಿಶೀಲಿಸಿದರು.

ಈ ವೇಳೆ ಸ್ಥಳದಲ್ಲಿದ್ದ ಸಂಬಂಧಿತ ಅಧಿಕಾರಿಗಳಾದ ಪಿಡಬ್ಲ್ಯುಡಿ ಅಧಿಕಾರಿಗಳು ಹಾಗೂ ಸಹಾಯಕ ಇಂಜಿನಿಯರ್ ತಿಮ್ಮಯ್ಯ ಅವರಿಗೆ ಕಾಮಗಾರಿಯನ್ನು ಕೂಡಲೇ ಆರಂಭಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಈಗಾಗಲೇ ಭೂಮಿಪೂಜೆ ನೆರವೇರಿದ್ದು, ಸಿದ್ಧಪಡಿಸಲಾದ ನೀಲನಕ್ಷೆ ಹಾಗೂ ಅಂದಾಜು ಪತ್ರಿಕೆಯಂತೆ ಜಿ+1 ಮಾದರಿಯ ಕಟ್ಟಡ ಕಾಮಗಾರಿಯನ್ನು ಆರಂಭಿಸಿ ಗುಣಮಟ್ಟದೊಂದಿಗೆ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು. ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ಎರಡು ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸಮಾಜದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಮುದಾಯ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಗಫೂರ್ ಸಾಬ್, ಕೆ. ಶಾಂತಪ್ಪ, ರುದ್ರಪ್ಪ ಅಂಗಡಿ, ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಬಿ.ಕೆ. ಅಮರೇಶಪ್ಪ (ವಕೀಲರು), ರೌಡ್ರು ಮಹಾಂತೇಶ್ ಸ್ವಾಮಿ, ಸೈಯದ್ ಖಾಲಿದ್ ಖಾದ್ರಿ, ರಾಜ ಸುಭಾಷ್ ಚಂದ್ರ ನಾಯಕ್, ಹುಸೇನ್ ಬಾಷಾ ಕೊಡಲಿ, ಸತ್ತಾರ್ ಬಂಗ್ಲೆವಾಲೆ, ಹಿದಾಯತ್ ನಾಯಕ್, ಹನುಮಂತರಾಯ ಯರಮಲದೊಡ್ಡಿ, ಹಂಪಯ್ಯ ನಾಯಕ್, ಕಾಮೇಶ್, ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಭಾಗಯ್ಯ ನಾಯಕ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *