ತಾಳಿಕೋಟಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಇಂದು(ಜೂನ್ 11) ತಾಳಿಕೋಟಿಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12-00 ಘಂಟೆಗೆ ಪಟ್ಟಣದ ಗಡಿ ಸೋಮನಾಳ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಗ್ನಿಶಾಮಕ ಠಾಣೆಯ ಕಟ್ಟಡವನ್ನು ಉದ್ಘಾಟಿಸುವರು. ನಂತರ ಮಧ್ಯಾಹ್ನ1-00 ಘಂಟೆಗೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರ್ ಐ ಡಿ ಎಫ್ 31ರ ಯೋಜನೆ ಅಡಿಯಲ್ಲಿ ತಾಳಿಕೋಟಿ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರೂ.500 ಲಕ್ಷ ಮೊತ್ತದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಮತ್ತು 2024- 25 ಹಾಗೂ 2025-26 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ತಾಳಿಕೋಟಿ ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ಮುದ್ದೇಬಿಹಾಳ ಮತ್ತು ನಾಲತವಾಡ ಉಪ ಮಾರುಕಟ್ಟೆ ಪ್ರಾಂಗಣದ ವಿವಿಧ 9 ಸಂಖ್ಯೆ, ರೂ.170 ಲಕ್ಷ ಮೊತ್ತದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು ಎಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *