ಮಾನ್ವಿ: ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಘಟಕದಲ್ಲಿ ಸಾರಿಗೆ ಘಟಕದ ವ್ಯವಸ್ಥಾಪಕರು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಬಂಡೆಗುರು ಇತ್ತೀಚಿಗೆ ಬಸ್ ಅನುಕೂಲ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು. ಈ ಕುರಿತು ಸಂಜೆ ವರದಿ ಪತ್ರಿಕೆಯಲ್ಲಿ “ಕರೆಗುಡ್ಡ ಗ್ರಾಮಕ್ಕೆ ಸಮರ್ಪಕವಾಗಿ ಬಸ್ಸಗಳ ಸಂಚಾರಕ್ಕೆ ಮನವಿ” ತಲೆ ಬರಹದಡಿ ವರದಿ ಪ್ರಕಟವಾಗಿತ್ತು. ಈ ವರದಿಗೆ ಇಂದು ಫಲ ಸಿಕ್ಕಿದೆ.
ಶೈಕ್ಷಣಿಕ ವರ್ಷ ಪ್ರಾರಂಭ ಆಗಿರುವುದರಿಂದ ತಾಲೂಕಿನ ವಿವಿಧ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಗ್ರಾಮಗಳಿಂದ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜುಗಳಿಗೆ ಆಗಮಿಸುವುದರಿಂದ ಮಾನ್ವಿ ಸಾರಿಗೆ ಘಟಕದಿಂದ ಬೆಳಿಗ್ಗೆ ಹಾಗೂ ಸಂಜೆ ಶಾಲಾ ಅವಧಿಗೆ ಪೂರಕವಾಗಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಘಟಕ ವ್ಯವಸ್ಥಾಪಕರು ತಿಳಿಸಿ ಅದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು. ಇದಕ್ಕಾಗಿ ಗ್ರಾಮಸ್ಥರು ಸಾರಿಗೆ ಇಲಾಖೆಗೆ ಧನ್ಯವಾದ ತಿಳಿಸಿದ್ದಾರೆ.

