ಬಳ್ಳಾರಿ / ಕಂಪ್ಲಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಂಪ್ಲಿ ತಾಲೂಕು ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಡೆಪ್ಪ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನಂತರ ನೂತನ ಪ್ರಧಾನ ಕಾರ್ಯದರ್ಶಿ ಹೆಚ್.ಜಡೆಪ್ಪ ಮಾತನಾಡಿ, ಇತ್ತೀಚೆಗೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆಯಲ್ಲಿ ಸದಸ್ಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ನಂತರ ನೂತನ ಪದಾಧಿಕಾರಿಗಳ ಸ್ಥಾನದಲ್ಲಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನಮ್ಮನ್ನು ಆಯ್ಕೆ ಮಾಡಿರುವುದು ಖುಷಿ ತಂದಿದೆ. ಇದರಿಂದ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದ್ದು, ಶಿಕ್ಷಕರ ಸಹಕಾರದೊಂದಿಗೆ ಪ್ರೀತಿ, ವಿಶ್ವಾಸದ ಮೂಲಕ ಸಂಘದ ಅಭಿವೃದ್ಧಿ ಜೊತೆಗೆ ಶಿಕ್ಷಕರ ಬೇಡಿಕೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು. ನೂತನ ತಾಲೂಕು ಅಧ್ಯಕ್ಷ ಹನುಮಂತಪ್ಪ, ಖಜಾಂಚಿ ಐ.ಗಂಗಮ್ಮ ಹಾಗೂ ಸಹ ಶಿಕ್ಷಕ ವೃಂದದವರು ಸನ್ಮಾನಿಸಿ ಗೌರವಿಸುವ ಮೂಲಕ ಅಭಿನಂದಿಸಿದರು.

Leave a Reply

Your email address will not be published. Required fields are marked *