ಮಸ್ಕಿ -: ಅಧಿಕಮಾಸದ ನಿಮಿತ್ತ ತಾಲ್ಲೂಕಿನ ಬಳಗಾನೂರ ಪಟ್ಟಣದ ಬಂಧುಶತಪುರೇಶ ದೇವಸ್ಥಾನದಲ್ಲಿ ಜೂ. 14 ರಂದು ನಡೆಯುವ ವಿಶೇಷ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲು ಪೇಜಾವರಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಜೂ.13ರಂದು ಸಂಜೆ 6 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿರುವ ಸ್ವಾಮಿಜಿ ಪುರಪ್ರವೇಶವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬರಲಾಗುವುದು ಎಂದು ಸಮಿತಿ ತಿಳಿಸಿದೆ.

14ರಂದು ಬೆಳಿಗ್ಗೆ ಬಂಧುಪುರೇಶನ ಮೂರ್ತಿಗೆ ಅಭಿಷೇಕ, ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ನಂತರ ಸ್ವಾಮೀಜಿಗಳಿಂದ ಆಶೀರ್ವಚನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡರು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *