ಮಸ್ಕಿ -: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರ ಅನುಮೋದನೆ ಮೇರೆಗೆ ಹಾಗೂ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾದ ಎ.ವಸಂತ ಕುಮಾರ, ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಸನಗೌಡ ತುರ್ವಿಹಾಳ್, ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಸವರಾಜ ಪಾಟೀಲ್ ಇಟಗಿ ಇವರ ಅನುಮೋದನೆ ಮೇರೆಗೆ ಹನುಮೇಶ ತಂದೆ ಹನುಮಂತಪ್ಪ ಇವರನ್ನು ಮಸ್ಕಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ತಾವುಗಳು ಪಕ್ಷದ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಾವುಗಳು ಕಾರ್ಯೋನ್ಮುಖರಾಗಬೇ ಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ರಾಯಚೂರು ಜಿಲ್ಲಾಧ್ಯಕ್ಷರಾದ ಡಿ.ಕೆ.ಮುರಳಿಯಾದವ ವಕೀಲರು ಹಾರೈಸಿದ್ದಾರೆ.

Leave a Reply

Your email address will not be published. Required fields are marked *