ಸಿರವಾರ -: ತಾಲೂಕಿನ ಕುರುಕುಂದಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಸೈಕಲ್ ಮೂಲಕ ಜಾಗೃತಿ ಜಾಥಾ ನಡೆಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಅರಿವು, ಮೂಡಿಸಿದರು.

ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು, ಮಕ್ಕಳ ಶಿಕ್ಷಣದ ಮಹತ್ವ ಹಾಗೂ ಮಕ್ಕಳ ಹಕ್ಕುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿದ ವಿದ್ಯಾರ್ಥಿಗಳು ಬಾಲಕಾರ್ಮಿಕತೆಯನ್ನು ತೊಡೆದುಹಾಕುವ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ಪ್ರವೀಣ್, ಸಹ ಶಿಕ್ಷಕರಾದ ಶ್ರೀದೇವಿ, ಅತಿಥಿ ಶಿಕ್ಷಕರಾದ ಶಿವರಾಜ್, ಬಸವರಾಜ್, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರಾದ ಸುನೀತಾ ಹಾಗೂ ರತ್ನ, ದೊಡ್ಡಮ್ಮ, ರಂಗಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಾಲೆಯ ಶಿಕ್ಷಕರು, ಇ ಸಂಸ್ಥೆಯ ಕನ್ಸ್ಲೈಂಟ್ ಶಶಿಕಲಾ, ಗೀತಾ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬಾಲಕಾರ್ಮಿಕತೆಯನ್ನು ತಡೆಗಟ್ಟಿ ಪ್ರತಿಯೊಂದು ಮಗು ಕೂಡ ಶಿಕ್ಷಣ ಹಾಗೂ ಬಾಲ್ಯ ಜೀವನದಿಂದ ವಂಚಿತ ಆಗದಂತೆ ನೋಡಿಕೊಳ್ಳಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು.

Leave a Reply

Your email address will not be published. Required fields are marked *