ತಾಳಿಕೋಟಿ : ತಾಲೂಕಿನ ಮೈಲೇಶ್ವರ ಗ್ರಾಮದಲ್ಲಿರುವ ಬಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇದರ ಆಡಳಿತ ಮಂಡಳಿ ವತಿಯಿಂದ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಇವರನ್ನು ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎನ್ ಬಿ ನಡುವಿನಮನಿ,ಉಪಾಧ್ಯಕ್ಷ ಆರ್.ಬಿ.ನಡುವಿನಮನಿ, ಕಾರ್ಯದರ್ಶಿ ಎಂ.ಬಿ. ಮಡಿವಾಳರ, ಮುಖಂಡರಾದ ಮಡಿವಾಳಪ್ಪಗೌಡ ಬಿರಾದಾರ,ರಾಜುಗೌಡ ಕೋಳೂರ ಹಾಗೂ ಸಂಸ್ಥೆಯ ನಿರ್ದೇಶಕರು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *