ಮಸ್ಕಿ: ಮಸ್ಕಿ ಬ್ಲಾಕ್ ಕಾಂಗ್ರೆಸ್‌ವತಿಯಿಂದ ಇತ್ತಿಚೆಗೆ ನಡೆದ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ತರಬೇತಿ ಕಾರ್ಯಗಾರ ಕಾರ್ಯಕ್ರಮ ಬ್ಯಾನರ್‌ನಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಭಾವಚಿತ್ರ ಹಾಕದೇ ಶಿಷ್ಟಚಾರ ಉಲ್ಲಂಘನೆ ಮಾಡಿದ್ದಾರೆಂದು ಕಾಂಗ್ರೆಸ್ ನಗರ ಎಸ್.ಸಿ ಘಟಕದ ಉಪಾಧ್ಯಕ್ಷ ಭೀಮರಾಯ ಆರೋಪಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಉಪಮುಖ್ಯಮಂತ್ರಿ ಎಂಬ ಕಾರಣಕ್ಕೆ ಬ್ಯಾನರ್‌ನಲ್ಲಿ ಪೋಟೋ ಹಾಕದೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮತ್ತು ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು ದಲಿತ ಸಮಾಜಕ್ಕೆ ಅಪಮಾನ ಮಾಡಿದ್ದಾರೆಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದಿಂದ ಪಟ್ಟಣದಲ್ಲಿ ನಡೆಯುವ ಬಹುತೇಕ ಕಾರ್ಯಕ್ರಮಗಳಲ್ಲಿ ದಲಿತ ಸಮಾಜಕ್ಕೆ ಮತ್ತು ಮುಖಂಡರಿಗೆ ಅಪಮಾನ ಮಾಡುವಂತಹ ಘಟನೆಗಳನ್ನು ಜರುಗುತ್ತಾ ಬಂದಿವೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಶಾಸಕರು ಮತ್ತು ಪಕ್ಷದ ಅಧ್ಯಕ್ಷರುಗಳು ಗಮನಹರಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಮಾನಗಳಲ್ಲಿ ಪಕ್ಷಕ್ಕೆ ದಲಿತ ಸಮಾಜದಿಂದ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಯಮನಪ್ಪ ತಳವಾರ, ಹುಲಗಪ್ಪ ಹಸಮಕಲ್, ರಮೇಶ ಇದ್ದರು.

Leave a Reply

Your email address will not be published. Required fields are marked *