ಸಿಂಧನೂರು ಜೂನ್ 15 : ಮಾನ್ಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಸಾಹೇಬರು ಇಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಅಂಬಾಮಠಕ್ಕೆ ಭೇಟಿ ನೀಡಿ, ಜಗನ್ಮಾತೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಾಯಿಯ ಆಶೀರ್ವಾದ ಪಡೆದ ಬಳಿಕ ಅವರು ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಅಂಬಾದೇವಿಯ ಆಶೀರ್ವಾದದೊಂದಿಗೆ ಸಿಂಧನೂರು ಕ್ಷೇತ್ರವು ಅಭಿವೃದ್ಧಿಯ ಪಥದಲ್ಲಿ ಮತ್ತೊಂದು ಹೆಜ್ಜೆ ಇಡುತ್ತಿದೆ. ಧಾರ್ಮಿಕ ಕ್ಷೇತ್ರಗಳಿಗೆ ಬರುವ ಭಕ್ತಾದಿಗಳಿಗೆ ಯಾವುದೇ ಲೋಪವಾಗದಂತೆ ಉತ್ತಮ ಮೂಲಸೌಕರ್ಯಗಳನ್ನು ಒದಗಿಸುವುದು ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖ ಮುಖಂಡರಾದ ರಾಜುಗೌಡ, ಆರ್. ಸಿ. ಪಾಟೀಲ್, ತಹಸೀಲ್ದಾರ್ ಅರುಣ್ ದೇಸಾಯಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *