ಸಿಂಧನೂರು ಜೂನ್ 16: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ ರಾಯಚೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಮತ್ತು ಸಂತ ಆಂತೋನಿಯರ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

ಕಾರ್ಯಕ್ರಮದ ಕುರಿತು ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಅವರು ಮಲೇರಿಯಾ ರೋಗದ ಲಕ್ಷಣಗಳು, ಹರಡುವ ವಿಧಾನಗಳು ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಮತ್ತು ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು. ಮಲೇರಿಯಾ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮನೆ ಪರಿಸರವನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿಯಂತ್ರಕಗಳನ್ನು ಬಳಸಬೇಕು ಒಟ್ಟಾರೆ ವಿದ್ಯಾರ್ಥಿಗಳು ಮಲೇರಿಯಾ ನಿರ್ಮೂಲನೆಯಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.

ನಂತರ ಮಾತನಾಡಿದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ನಿಂಗಮ್ಮ ಅವರು ಶಾಲಾ ವಿದ್ಯಾರ್ಥಿಗಳು ಮಲೇರಿಯಾ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳು ಸಹಭಾಗಿತ್ವ ಅತ್ಯಗತ್ಯ. ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂತ ಅಂತೋನಿಯರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮೇರಿ. ಶಿಕ್ಷಕರಾದ . ರಾಮಣ್ಣ .ಶೈಲಜಾ. ಪ್ರಕಾಶ. ಮೀನಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ ನಾಯಕ ಶಿಕ್ಷಕರಾದ ಯಲ್ಲಪ್ಪ. ಕಾವೇರಿ. ಬಸವರಾಜ. ಪಾರ್ವತಿ .ಶ್ರೀದೇವಿ. ಚನ್ನಬಸಮ್ಮ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ. ಅಂಬಮ್ಮ. ಆಶಾ ಕಾರ್ಯಕರ್ತರಾದ ಸುಜಾತ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *