ರಾಯಚೂರು ಜೂನ್ 16 (ಕರ್ನಾಟಕ ವಾರ್ತೆ): ಮಾಹಿತಿ ಹಕ್ಕು ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕರ್ತವ್ಯಗಳು ಹಾಗೂ ಮಾಹಿತಿ ಹಕ್ಕು ಸಂಬAಧಿತ ವಿಷಯಗಳ ಕುರಿತು ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಜೂನ್ 20ರ ಬೆಳಿಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಾಗುವಂತೆ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್ ಅವರು ಕೋರಿದ್ದಾರೆ.
ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ. ವೆಂಕಟ ಸಿಂಗ್ ಹಾಗೂ ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರುಗಳಾದ ರಾಮನ್ ಕೆ. ಮತ್ತು ಡಾ.ರಿಚರ್ಡ್ ವಿನ್ಸೆಂಟ್ ಡೊಸೋಜ ಅವರು ಜೂನ್.20ರ ಶನಿವಾರ ದಂದು ರಾಯಚೂರು ಜಿಲ್ಲೆಗೆ ಆಗಮಿಸಿ, ಮಾಹಿತಿ ಹಕ್ಕು ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕರ್ತವ್ಯಗಳು ಹಾಗೂ ಮಾಹಿತಿ ಹಕ್ಕು ಸಂಬAಧಿತ ವಿಷಯಗಳ ಕುರಿತು ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಹಾಗೂ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *