ರಾಯಚೂರು, ಜೂ.16: ಗಾನಸುಧೆ ಕಲಾಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಜವಾಹರ ನಗರದ ಪ್ರಾರ್ಥನಾ ಮಂದಿರದಲ್ಲಿ ಭಕ್ತಿ ಗೀತೆಗಳ ಸಂಗೀತ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಯುವ ಗಾಯಕರು ವಿವಿಧ ಕನ್ನಡ ಹಾಗೂ ದೈವಭಕ್ತಿ ಗೀತೆಗಳನ್ನು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿ ನೆರೆದಿದ್ದ ಸಂಗೀತಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು. ಭಕ್ತಿ ಸಂಗೀತದ ಮೂಲಕ ಸಾಂಸ್ಕೃತಿಕ ಪರಂಪರೆ, ಆಧ್ಯಾತ್ಮಿಕ ಮೌಲ್ಯಗಳು ಹಾಗೂ ಭಾರತೀಯ ಸಂಸ್ಕೃತಿಯ ಮಹತ್ವವನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗಾಯಕರ ಸುಮಧುರ ಕಂಠಸಿರಿಗೆ ಸಂಗೀತಾಸಕ್ತರು ಮೆಚ್ಚುಗೆ ವ್ಯಕ್ತಪಡಿಸಿ, ಇಂತಹ ಕಾರ್ಯಕ್ರಮಗಳು ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿನೋದ್ ಕುಮಾರ್ ಆಶಾಪುರ್, ಸುರೇಶ್ ಬಾಬು, ನಿಖಿಲ್, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *