9 ವರ್ಷದ ಅಕ್ಕ-ತಂಗಿಯರ ಮೇಲೆ ಕಾಮುಕನ ಕಿರುಕುಳ, ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಆರೋಪ ಪೋಕ್ಸೋ ಕಾಯ್ದೆಯಡಿ ಪ್ರಕರಣ ಆರೋಪಿ ಬಂಧನ!ಬೆದರಿಕೆ, ಭಯ, ಬಳಿಕ ಸ್ಪೋಟಗೊಂಡ ಸತ್ಯ ಸಿಂಧನೂರಿನಲ್ಲಿ ಬೆಚ್ಚಿಬೀಳಿಸಿದ ಪ್ರಕರಣ!

ಸಿಂಧನೂರು ನಗರದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದ್ದು, 9 ವರ್ಷದ ಅಕ್ಕ-ತಂಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ನಗರದ ವಾರ್ಡ್ ನಂ.30ರ ಸಮೀಪದ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿಯ ಗೀತಾ ಐಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಬಾಬು ತಂದೆ ಖಾದರ್ ಸಾಬ್ ಮಸ್ಕಿ (30) ಎಂಬಾತ, ಶಾಲೆ ಮುಗಿಸಿಕೊಂಡು ಮನೆ ಸಮೀಪ ಆಟವಾಡುತ್ತಿದ್ದ ಇಬ್ಬರು ಬಾಲಕಿಯರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಬಳಿಕ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬೆದರಿಕೆಯಿಂದ ಭಯಗೊಂಡಿದ್ದ ಬಾಲಕಿಯರು ತಕ್ಷಣ ವಿಷಯವನ್ನು ಬಹಿರಂಗ ಪಡಿಸದೇ ಇದ್ದು, ಒಂದು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮಕ್ಕಳ ಹೇಳಿಕೆ ಹಾಗೂ ಪೋಷಕರ ದೂರಿನ ಆಧಾರದ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *