ಮಸ್ಕಿ: ಮಸ್ಕಿ ವಿಧಾನ ಕ್ಷೆತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾರ್ಯಕರ್ತರು ಮತ್ತು ನಿಷ್ಠಾವಂತರನ್ನು ಶಾಸಕರು ಕಡೆಗಣನೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಬಸನಗೌಡ ಮುದಬಾಳ ಹಾಗೂ ಮಹಾಂತೇಶ ಜಾಲವಾಡಗಿ ಆರೋಪಿಸಿದರು.
ಮಸ್ಕಿ ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಇತ್ತೀಚಿಗೆ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದಿದ್ದ ನಡೆದ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಅರ್) ತರಬೇತಿ ಕಾರ್ಯಾಗಾರದಲ್ಲಿ ಪಕ್ಷ ನೇಮಿಸಿದ್ದ ಬಿಎಲ್ಒ-2ಗಳು ಪಾಲ್ಗೊಂಡಿದ್ದಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಶಾಸಕ ಬಸನಗೌಡ ತುರುವಿಹಾಳ ಅವರು ನನಗೆ ಸಭೆಯಿಂದ ಹೊರಗೆ ಹೋಗಿ ಎಂದು ಅವಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಅವರು ಮೌನವಹಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಎರಡು ಚುನಾವಣೆಯಲ್ಲಿ ಪಕ್ಷಕ್ಕಾಗಿ ಮತ್ತು ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ದುಡಿದ್ದೇವೆ. ಇತ್ತೀಚಿನ ದಿನಗಳಲ್ಲಿ ಪಕ್ಷದ ಶಾಸಕರು ಮತ್ತು ಪಕ್ಷದ ಅಧ್ಯಕ್ಷರು ಮೂಲ ಕಾರ್ಯಕರ್ತರನ್ನು ಕಡೆಗಣಿಸಿ, ವಲಸೆ ಬಂದಿರುವ ಕೆಲವರಿಗೆ ಹುದ್ದೆಗಳನ್ನು ನೀಡುತ್ತಿರುವದರಿಂದ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದ ಕಾರ್ಯಕರ್ತರನ್ನು ಮೂಲೆಗುಂಪು ಮಾಡುತ್ತಿರುವದರಿಂದ ಕಾರ್ಯಕರ್ತರಲ್ಲಿ ಅಸಮಧಾನವಾಗಿದೆ. ಮುಂದಿನ ದಿನಗಳಲ್ಲಿ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಬಹಿರಂಗವಾಗಿ ತಮ್ಮ ತಮ್ಮ ನೋವುಗಳನ್ನು ಹೊರ ಹಾಕಲಿದ್ದಾರೆಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವಿರಾ ಎಂಬ ಪತ್ರಕರ್ತನ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ
ಮಹಾಂತೇಶ ನಾಯಕ ಜಾಲವಾಡಗಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಸಾಕಷ್ಟು ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿದಿದ್ದಾರೆ ಆದರೆ ಅಧಿಕಾರ ಬಂದಾಗಿನಿಂದ ಶಾಸಕರು ಹಾಗೂ ಅವರ ಕುಟುಂಬದವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಮುಂಬರುವ ದಿನಗಳಲ್ಲಿ ಕ್ಷೇತ್ರದ ಜನರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು ಈ ಸಂದರ್ಭದಲ್ಲಿ ದೇವಣ್ಣ ನಾಯಕ, ಭೀರಪ್ಪ ಗುಡಿಹಾಳ, ಮಾಳಿಂಗಪ್ಪ ಗೌಡನಭಾವಿ ಇದ್ದರು.

