ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಬೆಳಗೋಡುಹಾಳು ಗ್ರಾಮದ ಮುಸ್ಲಿಂ ಸುನ್ನಿ ಖಬರಸ್ತಾನ್ ಕಾಂಪೌಂಡ್ ಗೋಡೆ ಕಾಮಗಾರಿ ಕಳಪೆಯಿಂದ ಕೂಡಿದ್ದು, ವಕ್ಫ್ ಬೋರ್ಡ್ ಅಧಿಕಾರಿಗಳು ಕಾಮಗಾರಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘದ ಜಿಲ್ಲಾ ಅಧ್ಯಕ್ಷ ಬಿ. ನಬೀಸಾಬ್ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿ, ಪ್ರಸ್ತುತ ಕಾಮಗಾರಿ ಅಂದಾಜು ಪಟ್ಟಿ ಪ್ರಕಾರ ನಡೆಯುತ್ತಿಲ್ಲ ಎಂದು ದೂರಿದ್ದಾರೆ.
ಜಿಲ್ಲಾ ಮತ್ತು ರಾಜ್ಯ ವಕ್ಫ್ ಬೋರ್ಡ್ ಅಧಿಕಾರಿಗಳು ಕೂಡಲೆ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಬೇಕು. ತಪ್ಪಿದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

